

ಬೆಳ್ತಂಗಡಿ: ಫೆ. 14ರಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ವಂದೇ ಮಾತರಂ ಗೀತೆಯನ್ನು ಹಾಡಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆ ಆರಂಭಗೊಂಡಿತು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಖಿತ ಶೆಟ್ಟಿ ಆಗಮಿಸಿ ಅಹಲ್ಯ ಬಾಯಿ ಹೊಳ್ಕರ್ ಅವರ 300ನೇ ಜನ್ಮ ಶತಾಬ್ದಿಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಹಾಗೂ ಇದೇ ಬರುವ ಫೆ.23ರಿಂದ 29ರೊಳಗೆ ಸಾಮರಸ್ಯ ಕಾರ್ಯಕ್ರಮದಡಿಯಲ್ಲಿ ಶಕ್ತಿಕೇಂದ್ರವಾರು ಪ್ರಮುಖರು ಒಂದು ಕುಟುಂಬವನ್ನು ತಮ್ಮ ಮನೆಗೆ ಕರೆದು ಸಹಭೋಜನವನ್ನು ಮಾಡಬೇಕು ಎಂದು ಹೇಳಿದರು.
ಹಾಗೆಯೇ ಉಪಸ್ಥಿತರಿದ್ದ ಜಿಲ್ಲಾ ಮಹಿಳಾಮೋರ್ಚಾ ಉಪಾಧ್ಯಕ್ಷರೂ ಹಾಗೂ ಬೆಳ್ತಂಗಡಿ ಮಹಿಳಾ ಮೋರ್ಚಾ ಪ್ರಭಾರಿ ಬಬಿತ ಮಹಿಳಾ ಮೋರ್ಚಾದಲ್ಲಿ ನಡೆಯುವ ಕಾರ್ಯವೈಖರಿಯ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದರು. ಮತ್ತು ಸಮಯ ಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತಿಳಿಸಿದರು.
ಜಿಲ್ಲಾ ಭಾಜಪಾ ಕಾರ್ಯದರ್ಶಿ ವಸಂತಿ ಮಚ್ಚಿನ, ಬೆಳ್ತಂಗಡಿ ಮಂಡಲ ಪ್ರಧಾನಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಮಂಡಲ ಪ್ರಭಾರಿ ಜಯಾನಂದ ಗೌಡ ಸಮಾಯೋಚಿತವಾಗಿ ಮಾತುಗಳನ್ನಾಡಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕಿಯಾಗಿ ಆಯ್ಕೆಯಾದ ರೈತ ಮೋರ್ಚಾದ ಸದಸ್ಯೆ ಅಶ್ವಿನಿ ಹೆಬ್ಬಾರ್, ಉಜಿರೆ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷೆಯಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಕಾರ್ಯದರ್ಶಿಯಾದ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿಂದುಳಿದ ಮೋರ್ಚಾ ಸದಸ್ಯೆ ಆದ ಪ್ರಮೀಳಾ ಉಜಿರೆ, ಬೆಳ್ತಂಗಡಿ ಜೆ. ಸಿ. ಐ ಅಧ್ಯಕ್ಷರಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಸದಸ್ಯೆ ಆಶಾಲತ ಇವರುಗಳನ್ನು ಅಭಿನಂದಿಸಿದಲಾಯಿತು.
ಈ ಸಭೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಂಡಲ ಮಹಿಳಾ ಮೋರ್ಚಾದ ಪ್ರಧಾನಕಾರ್ಯದರ್ಶಿ ಪೂರ್ಣಿಮಾಜಯಂತ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ನಿರೂಪಿಸಿ, ಚಂಚಲಾಕ್ಷಿ ಧನ್ಯವಾದವಿತ್ತರು.