

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಕಾಶ್ಮೀರ್ ಮೆನೇಜಸ್ ನಿಧನದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಫೆ. 15ರಂದು ಶ್ರದ್ಧಾಂಜಲಿ ಸಭೆ ನಡೆಯಿತು.
ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಮೆನೇಜಸ್ ಅವರು ಸಂಸ್ಥೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಶಿಕ್ಷಕ ಯುವರಾಜ ನುಡಿ ನಮನವನ್ನು ಸಲ್ಲಿಸುತ್ತಾ, ಶಿಕ್ಷಣ ಕಾಶಿ ಎನಿಸಿದ ಉಜಿರೆಯಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭವಾದ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿನಿಲಯದ ಪ್ರಧಾನ ಪಾಲಕರಾಗಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ, ಹೈನುಗಾರಿಕೆ, ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನೀಡುವಲ್ಲಿ ಕಾಶ್ಮೀರರ್ ಮೆನೇಜಸ್ ಸಫಲರಾದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗ ಹಾಗೂ ಶ್ರೀ ಧ. ಮಂ. ರೆಸಿಡೆನ್ಶಿಯಲ್ ಪಿ.ಯು ಕಾಲೇಜಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು” ಎಂದರು.
ಕಾಶ್ಮೀರ್ ಮೆನೇಜಸ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು, ವಿದ್ಯಾರ್ಥಿ ವೃಂದದವರು ಆತ್ಮ ಸದ್ಗತಿಗಾಗಿ 1 ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಿದರು.