Site icon Suddi Belthangady

ಗುರುವಾಯನಕೆರೆ ಶಕ್ತಿನಗರದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ-ಮಾಂಸ ಕತ್ತರಿಸುತ್ತಿದ್ದ ಇಬ್ಬರ ಸೆರೆ

ಗುರುವಾಯನಕೆರೆ: ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಬೆಳ್ತಂಗಡಿ ಪೊಲೀಸರು ಇಂದು ದಾಳಿ ಮಾಡಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ.

ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

ಅನ್ವರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ಸುದ್ದಿ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

Exit mobile version