Site icon Suddi Belthangady

ಗುರುವಾಯನಕೆರೆ: ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು.

ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.

Exit mobile version