Site icon Suddi Belthangady

6ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ – ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆ ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕರಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಗುರುವಾಯನಕೆರೆ ಕುಲಾಲ ಮಂದಿರದ ಬಳಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ಮಾಡಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಮುಖರಾದ ರಕ್ಷಿತ್ ಪಣಿಕ್ಕರ್, ಈಶ್ವರ್ ಭೈರ, ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉದಯ್ ಬಂದಾರು, ಮಲಂವತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Exit mobile version