Site icon Suddi Belthangady

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಫೆ. 18ರಂದು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಹೈಕೋರ್ಟ್ ನ್ಯಾಯವಾದಿ, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ. ಮತ್ತು ಹಿರಿಯ ವಕೀಲರ ಬಿ. ಎಂ. ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.

Exit mobile version