ತಣ್ಣೀರುಪಂತ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 18ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ಫೆ. 18ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಮೃತ ವಿದ್ಯಾರ್ಥಿ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿಯಾಗಿದ್ದನು. ಪುಂಜಾಲಕಟ್ಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಣ್ಣೀರುಪಂತ: 7 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
