ಉಜಿರೆ: ಫೆ. 19ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ರವರಿಂದ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ನಿವೃತ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಬಿ., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು.