ಬೆಳ್ತಂಗಡಿ: ಉಜಿರೆ ಬೆಳಾಲು ಕ್ರಾಸ್ ಸಮೀಪ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಫೆ.19ರಂದು ನಡೆದಿದೆ.
ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ. ಸವಾರನನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನ ಯುವಕನಾಗಿದ್ದು ಮೇಲಂತಬೆಟ್ಟುವಿನಲ್ಲಿರುವ ಹಂದಿ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮಾಂಸವನ್ನು ಅಂಗಡಿಗಳಿಗೆ ಹಾಕಲು ಹೋಗುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಬೆಳ್ತಂಗಡಿ ಠಾಣಾ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.