

ಬೆಳ್ತಂಗಡಿ: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್. ಸಿ. ಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೋಟ್ಟು ರವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾ.1ರಂದು ನಡೆಯಲಿದೆ.
ಅದರ ಪೂರ್ವ ಭಾವಿ ಸಭೆ ಫೆ. 20ರಂದು ಬೆಳ್ತಂಗಡಿ ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಎಸ್.ಬಿ.ಜಯರಾಮ ರೈ, ಸಂಚಾಲಕರಾದ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಜಯಪ್ರಕಾಶ್ ರೈ ಸಿ, ಸಂಚಾಲಕರಾದ ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.
ಅಭಿನಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಲಾಯಿತು. ಕೊಯ್ಯೂರು ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಪ್ರಾರ್ಥನೆ ಮಾಡಿದರು.
ಬೆಳ್ತಂಗಡಿ ಡಿ.ಸಿ.ಸಿ ಬ್ಯಾಂಕಿನ ಮ್ಯಾನೇಜರ್ ಸುಧೀರ್ ಸ್ವಾಗತಿಸಿ, ನಾರಾವಿ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಧನ್ಯವಾದವಿತ್ತರು.