

ಲಾಯಿಲ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ ಅಧ್ಯಕ್ಷತೆಯಲ್ಲಿ ಫೆ. 21ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.


ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರಾದ ಅರವಿಂದ್, ಆಶಾ ಬೆನಡಿಕ್ಟ, ಸ ಲ್ಟಾನ, ಹರಿಕೃಷ್ಣ, ಪ್ರಸಾದ್ ಶೆಟ್ಟಿ, ರಜನಿ ಎಂ. ಆರ್., ದಿನೇಶ್ ಶೆಟ್ಟಿ, ಸವಿತಾ ಶೆಟ್ಟಿ, ಚಿದಾನಂದ ಶೆಟ್ಟಿ, ಮೊಹಮ್ಮದ್ ಸಲೀಂ, ರೇವತಿ, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಸ್ವಾಗತಿಸಿ, ಅನುಪಾಲನ ವರದಿಯನ್ನು ಕಾರ್ಯದರ್ಶಿ ತಾರಾನಾಥ್ ವಾಚಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧನೆ ಮಾಡಿದ ಮೂರು ಗಣ್ಯರಿಗೆ ಸನ್ಮಾನ ಮಾಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಚಂದ್ರಿಕಾ ಅಂಕಾಜೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜಯಾನಂದ ಅಂಕಾಜೆ, ಹಾಗೂ ಉದಯ ಕುಮಾರ್ ಪುತ್ರಬೈಲ್ ಇವರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.