Site icon Suddi Belthangady

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ Lab In Cab ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧ. ಮಂ. ಕಾಲೇಜು(ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸ. ಪ್ರೌ. ಪೆರ್ಲಬೈಪಾಡಿಯಲ್ಲಿ Lab In Cab ಕಾರ್ಯಕ್ರಮವನ್ನು ಫೆ. 20ರಂದು ಹಮ್ಮಿಕೊಳ್ಳಲಾಯಿತು.

ಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿರುವ 49 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳು ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ Transpiration pull concept ನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಅವರು ಉಪಸ್ಥಿತರಿದ್ದರು.

ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಭಿಲಾಷ್ ಕೆ. ಎಸ್. ಹಾಗೂ ಭವ್ಯ ಡಿ. ನಾಯಕ್ ಕಾರ್ಯಕ್ರಮವನ್ನು ಆಯೋಜಿಸಿದರು.

ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆನ್ಸನ್ ಬ್ರಿನೋದ್ ಫರ್ನಾಂಡಿಸ್, ಆಶುರಾ ಫೈಝಾ ಹಾಗೂ ಮೇಘಶ್ರೀ ವಿ. ಎಸ್. ಸಹಕರಿಸಿದರು.

Exit mobile version