ಪಡಂಗಡಿ: ಇಲ್ಲಿಯ ಅರಿಹಂತ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟಿಲೇಶ್ವರಿ ಸುಪಾರಿ ಟ್ರೇಡರ್ಸ್ ಫೆ. 22ರಂದು ಶುಭಾರಂಭಗೊಂಡಿತು. ತಾಲೂಕು ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳು ಪಡಂಗಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಪಡಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಪಡಂಗಡಿ ಸಹಕಾರ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಪಡಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ಬಾಸ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ಕೃಷಿಕ ಶ್ರೀನಿವಾಸ ಶೆಟ್ಟಿ ಹಂಕರಜಾಲು, ಅರಿಹಂತ್ ಕಾಂಪ್ಲೆಕ್ಸ್ ಮಾಲಕ ಅರಿಹಂತ್ ಜೈನ್, ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ಆನಂದ ಶೆಟ್ಟಿ ವಾತ್ಸಲ್ಯ ಮೊದಲದವರು ಉಪಸ್ಥಿತರಿದ್ದು ಶುಭಹಾರೈಸಿದರು. ಮಾಲಕ ಸಂತೋಷ್ ಶೆಟ್ಟಿ ಹಲ್ಲಂದೋಡಿ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ ಗೌರವಿಸಿದರು.