Site icon Suddi Belthangady

ನಡ್ವಾಲ್ ನಲ್ಲಿ ಮಹಾ ಶಿವರಾತ್ರಿ ಕಾರ್ಯಕ್ರಮ

ನಡ್ವಾಲ್: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್ ನಲ್ಲಿ ಫೆ. 26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.

ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ 6.00ರಿಂದ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಆದರಣಿಯ ಭಗವದ್ಭಕ್ತರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ತಮ್ಮಲ್ಲಿ ಭಕ್ತಿ ಪೂರ್ವಕವಾಗಿ ವಿನಂತಿಸುವ ಶ್ರೀ ಪಾಂಡುರಂಗ ಮರಾಠೆ ಹಡೀಲು ಅಧ್ಯಕ್ಷರು ಶಿವರಾತ್ರಿ ಉತ್ಸವ ಸಮಿತಿ, ಗುರುರಾಜ್ ಗುರಿಪಳ್ಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವ್ಯವಸ್ಥಾಪನ ಸಮಿತಿ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಲ್.

Exit mobile version