ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ. 25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿ ಸುಶೀಲರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು. ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಉಜಿರೆ ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ ಆರ್. ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ನಳಿನಿ, ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.