ಧರ್ಮಸ್ಥಳ: ಫೆ. 27ರಂದು ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಬೆಳ್ತಂಗಡಿ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ. ಬಂದಾರು, ಕಾರ್ಯಕಾರಿಣಿ ಸದಸ್ಯ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.