ಮಡಂತ್ಯಾರು: ಗ್ರಾಮ ಪಂಚಾಯತ್ ನ 2024-2 5ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಫೆ.28ರಂದು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪರವರ ಅಧ್ಯಕ್ಷತೆಯಲ್ಲಿ ಜರಗಿತು.
ನೋಡೆಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಡಾ. ವಿನಯ್ ರವರು ವಹಿಸಿ ಸಭೆಯನ್ನು ಮುನ್ನಡೆಸಿದರು. ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ಪರಮೇಶ್ವರ, ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಸಂಗೀತಾ, ಆಗ್ನೆಸ್ ಮೋನಿಸ್, ಮೋಹಿನಿ,ಹರಿಪ್ರಸಾದ್, ಉಮೇಶ್ ಸುವರ್ಣ, ಹನೀಫ್, ಸಾರಸನಾಫ್, ಪಾರ್ವತಿ, ಶೈಲೇಶ್ ಕುಮಾರ್, ರಾಜೀವ, ಶಿಲಾವತಿ, ಇಲಾಖಾ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶೈಲೇಶ್ ಕುಮಾರ್ ಸ್ವಾಗತಿಸಿದರು. ಅಭಿವೃದ್ದಿ ಅಧಿಕಾರಿ ವರದಿ ಹಾಗು ಲೆಕ್ಕ ಪತ್ರ ಮಂಡಿಸಿದರು. ಜ. 26ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಭಾಗ ವಹಿಸಿದ ಸೇಕ್ರೆಡ್ ಹಾರ್ಟ್ ಕ್ಯಾಲೇಜು ವಿದ್ಯಾರ್ಥಿ ಯಶ್ವಿತಾ ಗೌಡ ಇವರನ್ನು ಗೌರವಿಸಲಾಯಿತು.