ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆ ಪುದುವೆಟ್ಟುವಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ. 28ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಪ್ರಯುಕ್ತ ನಡೆದ ‘ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ’ ವನ್ನು ಎಸ್. ಡಿ. ಎಮ್ ಶಿಕ್ಷಕರ ತರಬೇತಿ ಸಂಸ್ಥೆ, ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಮಂಜು ಆರ್. ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ‘ವಿದ್ಯಾರ್ಥಿಗಳಿಗೆ ದಿನನಿತ್ಯದಲ್ಲಿ ವಿಜ್ಞಾನ , ವಿಜ್ಞಾನದ ಕೌತುಕಗಳು , ನವೀನ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಕ್ಷೇತ್ರದ ಅಭೂತಪೂರ್ವವಾದ ಬೆಳವಣಿಗೆಯ ಬಗ್ಗೆ ಸ್ವಾರಸ್ಯಕರವಾಗಿ ಮಂಜು ಆರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ವೈಶಿಷ್ಟ್ಯತೆಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಬಗ್ಗೆ ಭಾಷಣವನ್ನು ಏರ್ಪಡಿಸಲಾಗಿತ್ತು. ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಜಿತೀಕ್ಷ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶಿಕ್ಷಕಿ ಶೀಲಾ ಎನ್. ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here