ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ. ಆರ್. ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 5ನೇ, 6ನೇ ಹಾಗೂ 7ನೇ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.