ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು.
ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ, ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಮ್. ವಿ. ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ, ಶುಭ ಹಾರೈಸುವ ಮೂಲಕ ವಿಜ್ಞಾನ ದಿನಾಚರಣೆಯ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಲಾಯಿತು. ಶಿಕ್ಷಕಿಯರಾದ ಅನುಷಾ ಮತ್ತು ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.