Site icon Suddi Belthangady

ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಇದರ ಅಧ್ಯಕ್ಷ ಸ್ಥಾನವನ್ನು ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಗೌಡ ಕೆ. ಅಲಂಕರಿಸಿದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ನಮ್ಮ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಂಚಾಯತ್ ನ ಸಿಬ್ಬಂದಿಗಳಾದ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ, ಹೇಮಾವತಿ, ಸಂಧ್ಯಾ, ಸ್ವಾತಿಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

Exit mobile version