ಕಲ್ಲೇರಿ: ಕೋಟಿ ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್, ಕರಾಯ, ತಣ್ಣೀರುಪoತ ಸಿ. ಎ. ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಸಹಯೋಗದಲ್ಲಿ ಕಲ್ಲೇರಿಯ ರೈತ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಪುತ್ತೂರು ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಸಿ. ಎ. ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ, ತಣ್ಣೀರುಪಂತ ಸಿ. ಎ. ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅಣವು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್, ನಿರ್ದೇಶಕ ರೋಹಿತ್ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ ಕುಮಾರ್, ಕೋಟಿ ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷ ದುರ್ಗಾಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.
ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.