ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಪೂರಣ್ ವರ್ಮ ಮತ್ತು ನಿರ್ದೇಶಕರ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು, ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.
ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು.