ಬಾರ್ಯ: ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗಿ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಕೊಡ ಮಾಡಿದ ರೂಪಾಯಿ ಎರಡು ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ 1 ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ತಾಲೂಕು ಜನಜಾಗೃತಿ ಕಾರ್ಯಕಾರಿಣಿ ಸಮಿತಿ ಸದಸ್ಯ, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ,ಗುರುವಾಯನೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ವಿಶಾಲಾಕ್ಷಿ, ಒಕ್ಕೂಟದ ಅಧ್ಯಕ್ಷ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.