ಸ. ಹಿ. ಪ್ರಾ. ಶಾಲೆ ಕಾಶಿಪಟ್ಣದಲ್ಲಿ ದಿನಾಂಕ 4.3.2025ನೇ ಮಂಗಳವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮವನ್ನು ನಡೆಸಿದರು. ವಿದ್ಯಾರ್ಥಿಗಳು ರಸ್ತೆಯಲ್ಲಿ ತೆರಳುವ ವಾಹನಗಳನ್ನು ನಿಲ್ಲಿಸಿ ಅವರಿಗೆ ರಸ್ತೆ ಸುರಕ್ಷತೆಯ ಬಗ್ಗೆ ವಿವರಣೆಗಳನ್ನು ನೀಡಿದರು.

ವಿದ್ಯಾರ್ಥಿಗಳ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಚಾಲಕರಿಗೆ ಹಾಗೂ ಸೀಟ್ ಬೆಲ್ಟ್ ಧರಿಸಿದ ಕಾರು ಚಾಲಕರುಗಳಿಗೆ ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಹೆಲ್ಮೆಟ್ ಧರಿಸದ ಹಾಗೂ ಸೀಟು ಬೆಲ್ಟ್ ಗಳನ್ನು ಧರಿಸದ ಚಾಲಕರಿಗೆ ಸುರಕ್ಷತಾ ಸೂಚನಾ ಕರಪತ್ರ ನೀಡಿ ಅವರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲಾಯಿತು.