ಬೆಳ್ತಂಗಡಿ: ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಹಿರಿಯ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸಿ ಫೆ. 28ರಂದು ಸೇವಾ ನಿವೃತ್ತಿ ಹೊಂದಿದ ರತ್ನಾವತಿ ಪಿ. ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಫೆ. 28ರಂದು ಬೆಳ್ತಂಗಡಿ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ನಡೆಯಿತು.

ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಉಸ್ಮಾನ್ ಎ., ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ರಶ್ಮಿ, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ, ತಾ. ಪ. ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸುಂದರ ಪೂಜಾರಿ, ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಅಘನೇಶ್, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ, ಮಂಗಳೂರು ನಗರ ಯೋಜನಾಧಿಕಾರಿ ಶ್ವೇತಾ, ಇಲಾಖೆಯ ಮೇಲ್ವಿಚಾರಕರು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ರತ್ನಾವತಿಯವರ ಕುಟುಂಬ ವರ್ಗದವರು ಹಾಜರಿದ್ದರು.