ಮಿತ್ತಬಾಗಿಲು: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಮಾ. 5ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಮಿತ್ತಬಾಗಿಲು ಸರ್ಕಾರಿ ಶಾಲೆಗೆ ಪ್ರತಿ ವರ್ಷ 100% ಉತ್ತಮ ಫಲಿತಾಂಶ ಬರುತ್ತಿದ್ದು ಶಾಲಾ ಮುಖ್ಯೋಪಾಧ್ಯಾಯ ಗೋಪಾಲ್ ಇವರನ್ನು ಸನ್ಮಾನಿಸಲಾಯಿತು ಹಾಗೂ ಗುಂಡೆಸೆತದಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಸಿದ್ರ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಗ್ರಾ. ಪಂ. ಸದಸ್ಯರಾದ ಚಂದ್ರಶೇಖರ ಗೌಡ, ಅಹಮ್ಮದ್ ಕಬೀರ್, ಚೇತನಾ, ಮೋಹಿನಿ, ಶಾಂಭವಿ, ರಾಮಣ್ಣ, ಲತಾ, ರಾಹುಲ್ ಹಮೀದ್, ವಿವಿಧ ಇಲಾಖೆಯ ಅಧಿಕಾರಿಗಳು, ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ. ನಿರೂಪಿಸಿದರು. ಅನುಪಾಲನ ವರದಿಯನ್ನು ಪಂಚಾಯತ್ ಗುಮಾಸ್ತ ಮಧುಕರ್ ವಾಚಿಸಿದರು.