Site icon Suddi Belthangady

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್‌ ಓ, ಎನ್.ಪದ್ಮನಾಭ ಮಾಣಿಂಜ ನಿಧನ

ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್‌ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು.

ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ, ನೇರ ನಿಷ್ಟುರವಾದಿ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್, ಸೊಸೆಯಂದಿರಾದ ಸ್ನೇಹ, ಟೀನಾ, ದಿವ್ಯ ಮತ್ತು ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ 12 ಗಂಟೆಯ ತನಕ ಬಲ್ಮಠದ “ಇಂದುಪದ್ಮ” ನಿವಾಸದಲ್ಲಿ ನಡೆಯಲಿದ್ದು, ತದನಂತರ ಪುಂಜಾಲಕಟ್ಟೆ ಮಾಣಿಂಜದ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಯಿಂದ 4 ರ ವರೆಗೆ ಮಾಣಿ0ಜ ಮನೆಯಲ್ಲಿ ಅಂತಿಮ ದರುಶನಕ್ಕೆ ವ್ಯವಸ್ಥೆ ಇದೆ.

Exit mobile version