ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ’ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮವು ಮಾರ್ಚ್ 5ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಕೆ. ಎಚ್. ಸಂಪನ್ಮೂಲ ವ್ಯಕ್ತಿಯಾಗಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ವಹಿಸಿದರು. ಕಾರ್ಯಕ್ರಮ ಸಂಯೋಜಕರಾದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ವಿನಯ ಶ್ಯಾಮ್ ಕಾರ್ಯಕ್ರಮದ ರೂಪುರೇಷೆಯಲ್ಲಿ ಸಹಕರಿಸಿದರು.