ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಮಾ. 05 ರಿಂದ ಮಾ. 07ರವರೆಗೆ ಕಾಲೇಜಿನಲ್ಲಿ ನಡೆಸಲಾಯಿತು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್. ಶ್ರಮದಾನಕ್ಕೆ ಚಾಲನೆ ನೀಡಿದರು.
ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.