Site icon Suddi Belthangady

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

ಪಟ್ರಮೆ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳು ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಹದಿಹರೆಯದಲ್ಲಿ ಹೆಣ್ಣು ಮಕ್ಕಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕ ಕ್ರಮಗಳ ಕುರಿತು ಕೊಕ್ಕಡ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಕ್ತದ ಪರೀಕ್ಷೆ ಮಾಡಿ ರಕ್ತದಲ್ಲಿರುವ ಹಿಮೋಗ್ಲೋಬಿನ್ ಪ್ರಮಾಣವನ್ನು ಪರೀಕ್ಷಿಸಿದ ಅವರು ಮಕ್ಕಳಿಗೆ ಹಿಮೋಗ್ಲೋಬಿನ್ ಕಡಿಮೆ ಆಗಲು ಕಾರಣ ಮತ್ತು ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಚೈತ್ರ ಮತ್ತು ಗಾಯತ್ರಿಹಾಗೂ ಶಾಲಾ ಶಿಕ್ಷಕ ವೃಂದದವರು ಜೊತೆಗಿದ್ದರು.

Exit mobile version