Site icon Suddi Belthangady

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ 25ಲಕ್ಷ ಅನುದಾನ – ನೂತನ ಸಭಾಭವನಕ್ಕೆ ಶಿಲಾನ್ಯಾಸ

ಮಡಂತ್ಯಾರು:ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಡಂತ್ಯಾರು ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಸಭಾಭವನಕ್ಕೆ ಶಿಲಾನ್ಯಾಸ

ಮಾ.8ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಪಾರೇಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ರಾವ್ ವಿಧಿ ವಿಧಾನ ನೆರವೇರಿಸಿದರು.

ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೊ.ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೆನ್ಸಿ ಪಿಂಟೋ, ಪ್ರಾಂಶುಪಾಲ ಸರೋಜಿನಿ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋ ನ್ಸ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ಪೈಸ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಲೇರಿಯ ಡಿಸೋಜಾ ಹಾಗೂ ನಿರ್ದೇಶಕರು, ಮಡಂತ್ಯಾರು ಸೊಸೈಟಿ ನಿರ್ದೇಶಕರು, ಗುತ್ತಿಗೆ ದಾರ ಪ್ರಶಾಂತ್ ಪ್ರತಿಮಾ ನಿಲಯ, ಊರ ಗಣ್ಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ಸರೋಜಿನಿ ಸ್ವಾಗತಿಸಿದರು. ಶಿಕ್ಷಕ ಧರಣೇಂದ್ರ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಜಯಶ್ರೀ ವಂದಿಸಿದರು.

Exit mobile version