ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಮಾ. 8ರಂದು ಈ ವರ್ಷದ 10ನೇ ತರಗತಿ ವಿದ್ಯಾರ್ಥಿಗಳ ಮಾತೃ ವಂದನೆ, ಪಿತೃ ವಂದನೆ, ಗುರುವಂದನಾ ಕಾರ್ಯಕ್ರಮ ನಡೆಯಿತು.

ಸೋನಿಯಾ ಯಶೋವರ್ಮ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ. ಮ. ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ನಿವೃತ್ತ ಕ್ಷೇಮಪಾಲನಾ ಅಧಿಕಾರಿ ಸೋಮಶೇಖರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಶ್ರೀ ಧ. ಮ. ಸೆಕಂರಿ ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ರತ್ನಮಾನಸ ವಸತಿ ನಿಲಯದ ಮೇಲ್ವಿಚಾರಕ ಯತೀಶ್ ಕೆ. ಬಳಂಜ ಅಧ್ಯಕ್ಷತೆ ವಹಿಸಿದ್ದರು.
ಸಿಬ್ಬಂದಿ ರವಿಚಂದ್ರ ಸ್ವಾಗತಿಸಿ ಇನ್ನೊರ್ವ ಸಿಬ್ಬಂದಿ ಉದಯರಾಜ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಸತಿ ನಿಲಯದ 10ನೇ ತರಗತಿ ವಿದ್ಯಾರ್ಥಿಗಳು, ಹೆತ್ತವರು ಹಾಜರಿದ್ದರು.