Site icon Suddi Belthangady

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಲಯಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಜೀರ್ಣೋದ್ಧಾರಗೊಳ್ಳುತ್ತಿರುವ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಹಾಗೂ ಸಮಾಜಸೇವಕ ಕಿರಣಚಂದ್ರ ಪುಷ್ಪಗಿರಿ ಅವರು ಮಾ.8ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು ಮತ್ತು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಿರಣಚಂದ್ರ ಪುಷ್ಪಗಿರಿ ಅವರು ಮಾತನಾಡಿ, “ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು ಎಂಬುದು ಎಲ್ಲರ ಆಶಯ. ಇದಕ್ಕಾಗಿ ಭಕ್ತರು, ಊರವರು ಮತ್ತು ಸಂಘ-ಸಂಸ್ಥೆಗಳ ಸಹಕಾರ ಅಗತ್ಯ.

ಶೀಘ್ರದಲ್ಲೇ ದೇವಸ್ಥಾನ ತನ್ನ ಪ್ರಾಚೀನ ಮಹಿಮೆ ಮರಳಿ ಪಡೆಯುವಂತೆ ಆಗಲಿ” ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‌ನ ತುಕ್ರಪ್ಪ ಶೆಟ್ಟಿ ನೂಜೆ, ಶಶಿ ಕೊಕ್ಕಡ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version