Site icon Suddi Belthangady

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಮಾ. 08ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಯೋಜಕರಾದ ಯಶವಂತ್ ಜಿ ನಾಯಕ್ ಮಾತಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆ ಜೀವನ ಮೌಲ್ಯಗಳು ಕೂಡ ಅಗತ್ಯ ಎಂದು ಹೇಳುತ್ತ ಶುಭ ಹಾರೈಸಿದರು.

ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯಿಯಾದ ವಿಜಯಾ ಕೆ ಉತ್ತಮ ಅಂಕವನ್ನು ಪಡೆದು ಜೀವನದ ಗುರಿಯನ್ನು ಸಾಧಿಸಿ ಎಂದು ಪ್ರೋತ್ಸಾಹದ ನುಡಿಯೊಂದಿಗೆ ಶುಭ ಹಾರೈಸಿದರು.

ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ವಿದ್ಯಾರ್ಥಿಗಳು ಜೀವನವನ್ನು ಸುಂದರವಾಗಿ ಇರಿಸಿಕೊಳ್ಳಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಹಾಗೆಯೇ ತಂದೆತಾಯಿಯರ ಮಾರ್ಗದರ್ಶನದಿಂದ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಹೇಳಿದರು.

9ನೇ ತರಗತಿಯ ವಿದ್ಯಾರ್ಥಿನಿ ಫಾತಿಮಾತ್ ಶೈಮಾ ಸ್ವಾಗತಿಸಿ, ಸಾನ್ವಿ ವೈ ಆಂಚನ್ ವಂದಿಸಿ , ಮನಸ್ವಿನಿ ಕೆ ಹಾಗೂ ದೀಪ್ತಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ- ಬೋಧಕೇತರ ವರ್ಗದವರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಪೂರ್ಣಗೊಂಡಿತು.

Exit mobile version