ಉಜಿರೆ: ಮಾ11ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ ಅಕೊಲೆಡ್ಸ್ ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.
2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಅಕೊಲೆಡ್ಸ್ ಅಕಾಡೆಮಿಯ ಸಂಯೋಜಕ ಹರೀಶ್ ಶೆಟ್ಟಿ ಹಾಗೂ ತರಗತಿ ನಡೆಸಿದ ಸಂಪನ್ಮೂಲ ವ್ಯಕ್ತಿಗಳಾದ ಪ್ರಶಾಂತ್, ಅಂಜುಷ, ನಿಕಿತಾ ಹಾಗೂ ಸೋನಾಲಿಕ ಆಸಿನರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.