ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ನಡೆಸುತ್ತಿರುವ ಸೋಮನಾಥ ಮಯ್ಯರು 90ನೇ ವಸಂತಕ್ಕೆ ಹೆಜ್ಜೆ ಇಡುತ್ತಿದ್ದು, ಈ ಸಂದರ್ಭದಲ್ಲಿ ಮಾ. 16ರಂದು ಅವರ ಸ್ವಗೃಹದಲ್ಲಿ ಗಣಪತಿ ಹೋಮ ಸಹಿತ ಸೌರಿ ಶಾಂತಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಸೋಮನಾಥ ಮಯ್ಯರು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದು ಬಡವ ಶ್ರೀಮಂತ ಎಂಬ ಭೇದವಿಲ್ಲದೆ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳಿ ತಿಳಿದುಕೊಂಡು ಉತ್ತಮ ಜೋತಿಷ್ಯ ಸಲಹೆ ಜೊತೆಗೆ ಆಧ್ಯಾತ್ಮಿಕ ಮಾರ್ಗದರ್ಶನ ಮಾಡುತ್ತಿದ್ದರು. ಬೋಜ ಮಾಸ್ಟ್ರು ಎಂದೇ ಪ್ರಸಿದ್ದಿ ಪಡೆದಿರುವ ಮಯ್ಯರು ಅಳದಂಗಡಿ ಶ್ರೀ ಮಹಾಗಣಪತಿ ದೇವರ ಜೀರ್ಣೋದ್ಧಾರ ಮಾಡುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಯಾವತ್ತಿಗೂ ಜಾತಿ ತಾರತಮ್ಯ ಮಾಡದೆ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದವರಾಗಿದ್ದು, ಧರ್ಮಪತ್ನಿ ಸರಸ್ವತಿ ಜೊತೆಗೆ ಸಂತೃಪ್ತ ಜೀವನ ನಡೆಸುತ್ತಿದ್ದಾರೆ.