Site icon Suddi Belthangady

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ವೇದಮೂರ್ತಿ ನಂದಕುಮಾರ ತಂತ್ರಿ ಅವರ ನೇತೃತ್ವದಲ್ಲಿ ಮಾ.15ರಿಂದ ಮಾ.19ವರೆಗೆ ನಡೆಯಲಿದೆ. ಮಾ.15ರಂದು ಬೆಳಿಗ್ಗೆ ಗಂಟೆ 11ಕ್ಕೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ರಾತ್ರಿ ಗಂಟೆ ೮ಕ್ಕೆ ಉತ್ಸವ, ಮಹಾಪೂಜೆ, ಬಲಿ, ಮಾ.16ರಂದು ಬೆಳಿಗ್ಗೆ 9ರಿಂದ ಉತ್ಸವ ಬಲಿ, ಕಲಶಾಭಿಷೇಕ, ಮಹಾಪೂಜೆ, ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ, ಮಾ.17ರಂದು ಬೆಳಿಗ್ಗೆ 9 ರಿಂದ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಅನ್ನಸಂತರ್ಪಣೆ, ರಾತ್ರಿ 7ರಿಂದ ಕೊಟ್ಟಿಗೆ ಕೆಲಸ, ಮಹಾರಥೋತ್ಸವ, ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಮಾ.18ರಂದು ಬೆಳಿಗ್ಗೆ ಗಂಟೆ 7ರಿಂದ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ, ಬೆಳಿಗ್ಗೆ ಗಂಟೆ 11 ಕ್ಕೆ ಸಂಗೀತ ಕಛೇರಿ, ನಂತರ ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 7ರಿಂದ ವಿನೂತನ ಶೈಲಿಯ ನೃತ್ಯ ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ಚೇತನ್ ವರ್ಕಾಡಿ ವಿರಚಿತ ಏರಾದುಪ್ಪು ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ, ಮಾ.19ರಂದು ಬೆಳಿಗ್ಗೆ ಗಂಟೆ 9ರಿಂದ ಕಲಶಾಭಿಷೇಕ, ಮಹಾಪೂಜೆ, ರಾತ್ರಿ 6ರಿಂದ ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ, ಮಾ.25ರಂದು ಸಾಯಂಕಾಲ 6-30ರಿಂದ ಜಾತ್ರಾ ಪ್ರಯುಕ್ತ ಬಪ್ಪನಾಡು ಮೇಳದಿಂದ ಯಕ್ಷಗಾನ ಬಯಲಾಟ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ನಡೆಯಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಕೆ.ಅಶೋಕ್ ಕುಮಾರ್ ಬಾಂಗಿಣ್ಣಾಯ ಹಾಗೂ ಅನುವಂಶಿಕ ಆಡಳಿತ ಮೊಕ್ತೇಸರ ಕೆ.ಬಿ ಹರಿಶ್ಚಂದ್ರ ಬಲ್ಲಳ್ ತಿಳಿಸಿದ್ದಾರೆ.

Exit mobile version