ಕೊಕ್ಕಡ:ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ದಕ್ಷಿಣ ಕನ್ನಡ, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ತಾಲೂಕು ಪಂಚಾಯತ್ ಬೆಳ್ತಂಗಡಿ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ, ಬೆಳ್ತಂಗಡಿ,ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ-ಕೊಕ್ಕಡ – ಇವುಗಳ ಜಂಟಿ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ ಕೊಕ್ಕಡ ಸೌತಡ್ಕ ದೇವಳದ ವಠಾರ ದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೆ. ವಿ. ಜಯರಾಮ್ ನೆರವೇರಿಸಿದರು. ಸಂಜೀವಿನಿ ಸಂತೆಯ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹನಾಧಿಕಾರಿ ಭವಾನಿ ಶಂಕರ್ ನೆರವೇರಿಸಿದರು.
ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾಧನೆಯ ಹಾದಿಯಲ್ಲಿರುವ ಸಂಘಗಳಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ, ನೇತ್ರಾವತಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಗಿರಿಜಾ, ಸಂಗಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕುಸುಮ, ದೇವಳದ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಕೆ ವಿ ಶ್ರೀನಿವಾಸ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ತಾಲೂಕು ವ್ಯವಸ್ಥಾಪಕರಾದ ನಿತೇಶ್, ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಆಳಂಬಿಲ, ಸದಸ್ಯರಾದ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಕಲಾ ಪ್ರಾರ್ಥಿಸಿ, ಅತಿಥಿಗಳನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ ಸ್ವಾಗತಿಸಿ, ಶಿಬಾಜೆ ಎಲ್ ಸಿ ಆರ್ ಪಿ ಮಾಲತಿ, ಕಲ್ಮoಜ ಎಂ ಬಿ ಕೆ ಪುಷ್ಪಾ, ಶಿಶಿಲ ಕೃಷಿ ಸಖಿ ಸುಮಾ ಸಂಜಯ್ ಕಾರ್ಯಕ್ರಮ ನಿರೂಪಿಸಿ, ವೇಣೂರು ಎಂ. ಬಿ. ಕೆ ಸುಲತಾ ಧನ್ಯವಾದವಿತ್ತರು.