ಮೇಲಂತಬೆಟ್ಟು: ಗ್ರಾಮ ಪಂಚಾಯತ್ ನ 2024-2 5ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಮಾ. 15ರಂದು ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸವಿತಾರವರ ಅಧ್ಯಕ್ಷತೆಯಲ್ಲಿ ಜರಗಿತು.
ನೋಡೆಲ್ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಅಧಿಕಾರಿ ವಾಣಿಶ್ರೀಯವರು ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ಗ್ರಾಮ ಪಂಚಾಯತ್ ನಲ್ಲಿ ಖಾಯಂ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಇಲ್ಲದೆ ಅಭಿವೃದ್ದಿ ಕುಂಠಿತವಾಗಿದೆ ಎಂದು ಸಚಿನ್ ಕುಮಾರ್ ನೂಜೋಡಿ ಗ್ರಾಮ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.
ಗ್ರಾಮ ಪಂಚಾಯತ್ ಆಡಳಿt ಮಂಡಳಿ ಉತ್ತರಿಸುತ್ತ ಅಧಿಕಾರಿಗಳಿಗೆ ಮಾನವಿ ಈಗಾಲೇ ಸಲ್ಲಿಸಿದ್ದೇವೆ. ಮತ್ತೊಮ್ಮೆ ನಿರ್ಣಯ ಕೈಗೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಸ್ತೆ ಬದಿಯಲ್ಲಿ ಕಸ ಬಿಸಾಡಿ ಹೋಗುತ್ತಾರೆ. ಅಂತಹ ಸ್ಥಳಗಳಲ್ಲಿ ಸಿ. ಸಿ. ಕ್ಯಾಮರ ಅಳವಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಜಮಾ ಖರ್ಚಿನ ವಿವರ, ವಾರ್ಡ್ ಸಭೆಯ ಮಾಹಿತಿ ನೀಡಿದರು.
ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್ ಎಂ.ವೇಣುಗೋಪಾಲ್ ಶೆಟ್ಟಿ, ದೀಪಿಕಾ, ಹರಿಣಾಕ್ಷಿ, ಚಂದ್ರ ಶೇಖರ್, ಪ್ರಭಾಕರ್ ಆಚಾರ್ಯ, ಶಶಿಕಲಾ, ಜಯಲಕ್ಷ್ಮಿ, ಸುಮಲತಾ, ಇಲಾಖಾ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.