ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಎನ್. ಪದ್ಮನಾಭಾ ಮಾಣಿಂಜ ಇವರಿಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಮಾ. 15ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದ ಸಭಾ ಭವನದಲ್ಲಿ ನುಡಿನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ಮಾಜಿ ಅಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬರ ಹೇರಾಜೆ ನುಡಿ ನಮನ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ನಿತೀಶ್ ಹೆಚ್., ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು,
ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ.ಪ್ರಸಾದ್, ಸಂಘದ ಮಾಜಿ ಅಧ್ಯಕ್ಷರುಗಳಾದ ಯೋಗೀಶ್ ನಡಕ್ಕರ, ಜಯರಾಮ ಬಂಗೇರ ಹೇರಾಜೆ, ಚಿದಾನಂದ ಪೂಜಾರಿ ಎಲ್ದಕ್ಕ, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.