Site icon Suddi Belthangady

ತಣ್ಣೀರುಪಂತ: ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಮಾ. 15ರಂದು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಉದ್ಘಾಟಿಸಿದರು. ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ನಿರ್ದೇಶಕ ಕುಶಾಲಪ್ಪ ಗೌಡ, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ನಿರ್ದೇಶಕ ಸತೀಶ್ ಕೆ., ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ನಿರ್ದೇಶಕ ಪ್ರವೀಣ್ ಗಿಲ್ಬರ್ಟ್ ಪಿಂಟೊ ಉಪಸ್ಥಿತರಿದ್ದರು.

ದ. ಕ. ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್ ಸಿ.ಆರ್‌.ಆರ್‌, ಎಸ್‌.ಎಲ್‌.ಆರ್, ಸಿ.ಆರ್‌.ಎ.ಆರ್., ಎನ್‌.ಪಿ.ಎ, ಆಯ್.ಎಂ.ಬಿ.ಪಿ, ಪಿ.ಎಲ್.ಗಳ ಬಗ್ಗೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಮಗ್ರ ಅಭಿವೃದ್ಧಿಯಲ್ಲಿ ನಿರ್ದೇಶಕರ ಪಾತ್ರ ಮತ್ತು ಜವಾಬ್ದಾರಿ ಬಗ್ಗೆ ವೈ. ವಿ. ಗುಂಡೂರಾವ್ ನಿವೃತ್ತ ಅಧಿಕಾರಿಗಳು ನಬಾರ್ಡ್ ಮಾಹಿತಿ ನೀಡಿದರು.

ಜಯಾನಂದ ಕಲ್ಲಾಪು ಸ್ವಾಗತಿಸಿದರು. ಜಗದೀಶ್ ಮೈರಾ ಧನ್ಯವಾದವಿತ್ತರು.

Exit mobile version