Site icon Suddi Belthangady

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಮಾ-14ರಂದು ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಎಸ್‌.ಡಿ.ಪಿ.ಐ ತೆಂಕಕಾರಂದೂರು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ನಾಯಕರಾದ ಮುಸ್ತಾಫಾ ಜಿ. ಕೆರೆ, ಅಶ್ರಫ್ ಕಟ್ಟೆ, ರೌಫ್ ಪುಂಜಾಲಕಟ್ಟೆ, ಶಮೀಮ್ ಯೂಸುಫ್, ವೇಣೂರು ಬ್ಲಾಕ್ ಅಧ್ಯಕ್ಷ ಅಶ್ರಫ್ ಬದ್ಯಾರು ಅತಿಥಿಗಳಾಗಿ ಆಗಮಿಸಿದ್ದರು.

ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ನವಾಝ್ ಕಟ್ಟೆ, ಖತಿಬರಾದ ಶಂಸುದ್ದಿನ್ ದಾರಿಮಿ, ಮಸೀದಿ ಪದಾಧಿಕಾರಿಗಳು, ಜಮಾತ್ ಬಾಂದವರು, ಕಾರ್ಯಕರ್ತರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Exit mobile version