ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಮಾ-16ರಂದು ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಮಾರೋಪ ಮಾತುಗಳನ್ನಾಡಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕ್ಷೇತ್ರ ಪದಾಧಿಕಾರಿಗಳು, ಸಮಿತಿ ಸದಸ್ಯರು, ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.