Site icon Suddi Belthangady

ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ: ಮಾ. 15ರಂದು ಎಸ್.ಡಿ.ಎಂ ಪಾಲಿಟೆಕ್ನಿಕ್ ಇದರ ಎನ್. ಎಸ್. ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು. ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಇದರ ಕಾರ್ಯದರ್ಶಿ ಸಂದೇಶ್ ರಾವ್ ಉದ್ಘಾಟಕರಾಗಿ ಆಗಮಿಸಿದ್ದರು. ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯರಾದ ಪ್ರವೀಣ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ. ಹಾಗೂ ಎನ್. ಎಸ್. ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್. ಎಸ್. ಎಸ್ ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ. ಮತ್ತು ಲೋಹಿತ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಎಸ್. ಡಿ. ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Exit mobile version