

ಮುಂಡಾಜೆ: 2024 – 25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ಇವರು ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮಂಜುಳಾ ರವರು ಖೋ ಖೋ, ಕಬಡ್ಡಿ, 4 ×400 ರಿಲೇ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೋಹನ ಕೆ. ಖೋ ಖೋ, ಕ್ರಿಕೆಟ್, 200ಮೀ. ಓಟ, 400 ಮೀ. ಓಟ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಮುಂಡಾಜೆ ಶಾಲೆ ಹಾಗೂ ಶಿಕ್ಷಣ ಇಲಾಖೆಗೆ ಕೀರ್ತಿ ತಂದಿರುತ್ತಾರೆ.