

ಕಾಶಿಪಟ್ಣ: ಮಂಗಳ ಸ್ಟೇಡಿಯಂ ಮಂಗಳೂರಿನಲ್ಲಿ ಮಾ. 19ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಥ್ರೋಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 12 ಜನ ಮಹಿಳಾ ಆಟಗಾರ್ತಿಯರು ಆಯ್ಕೆಯಾಗಿದ್ದು, ಬೆಳ್ತಂಗಡಿ ತಾಲೂಕಿನಿಂದ ಕಾಶಿಪಟ್ಣ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿಯವರು ಆಯ್ಕೆಯಾಗಿರುತ್ತಾರೆ. ಮುಂದಿನ ತಿಂಗಳು ನಡೆಯುವ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಇವರು ಹಾಗೂ ಇವರ ನೇತೃತ್ವದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಥ್ರೋಬಾಲ್ ತಂಡ ಭಾಗವಹಿಸಲಿದೆ.
ಇವರಿಗೆ ಶಾಲಾ ಪರವಾಗಿ, ಎಸ್.ಡಿ.ಎಮ್.ಸಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಸರ್ವ ಸಂಘ ಸಂಸ್ಥೆಗಳ ಹಾಗೂ ರಾಜ್ಯಮಟ್ಟದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಇವರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.