

ಬಳಂಜ: ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಪ್ರತಿ ವರ್ಷದಂತೆ ಈ ವರ್ಷ ಕೂಡ, ಈ ವರ್ಷದ ಪಬ್ಲಿಕ್ ಪರೀಕ್ಷೆಯನ್ನು ಬರೆಯುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಪೆನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕಿ ಸುಲೋಚನಾ, ಮಂಡಳಿಯ ಸದಸ್ಯರನ್ನು ಸ್ವಾಗತಿಸಿ ಪ್ರೀತಿಯಿಂದ ಗೌರವಿಸಿದರು.
ತುಂಬಾ ಖುಷಿಯಿಂದ ಮಾತನಾಡಿದರು, ಹಾಗೆ ವಿದ್ಯಾರ್ಥಿಗಳು ಕೂಡ ಖುಷಿ ಪಟ್ಟರು. ಶಾಲಾ ಶಿಕ್ಷಕರುಗಳು ಕೂಡ ಉತ್ತಮ ರೀತಿಯಲ್ಲಿ ಸ್ಪಂದಿಸಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಚಿಕ್ಕ ಸೇವೆಗೆ ಧನ್ಯವಾದ ಸಲ್ಲಿಸಿದರು. ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ, ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.