ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 1 ವಾರದ ಬೇಸಿಗೆ ಶಿಬಿರ ‘ಅಭಿವ್ಯಕ್ತಿಧಾರೆ 2025 ವಿದ್ಯಾರ್ಥಿ ಕಲರವ’ ಮಾ. 22ರಂದು ಉದ್ಘಾಟನೆಗೊಂಡಿತು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಒಂದು ವೇದಿಕೆ ಎಂದರು. ಕೇವಲ ಪಾಠ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ, ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಕಾಗದದ ಹೂವನ್ನು ಅರಳಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಬಳಿಕ ಅವರು, ‘ಸೃಜನಶೀಲ ಅಭಿವ್ಯಕ್ತಿ’ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಕೆ., ಶಿಬಿರದ ಪೂರ್ಣ ಪ್ರಮಾಣದ ಪ್ರಯೋಜನ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿದ್ಯಾರ್ಥಿಗಳಾದ ಧನಲಕ್ಷ್ಮೀ ಮತ್ತು ಶಾಂಭವಿ ಪ್ರಾರ್ಥಿಸಿದರು. ಶಿಕ್ಷಕ ಶ್ರೀರಾಮ್ ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ಮತ್ತು ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮ ನಿರೂಪಿಸಿದರು. ಜ್ಞಾನೇಶ್ ವಂದಿಸಿದರು.

LEAVE A REPLY

Please enter your comment!
Please enter your name here