Site icon Suddi Belthangady

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ

ಮಾಯಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟ ಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯರವರು ಕಮೋಡ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಯಾ ಒಕ್ಕೂಟದ ಪದಾಧಿಕಾರಿಯವರಾದ ಸಂಜೀವ ಗೌಡ, ರಾಮಚಂದ್ರ, ಭಾರತಿ, ಸೇವಾಪ್ರತಿನಿದಿ ಪ್ರಭಾ, ಸೇವಾಪ್ರತಿನಿದಿ ತಾರನಾಥ, ಒಕ್ಕೂಟದ ಪದಾಧಿಕಾರಿಗಳು ಮತ್ತು ಮನೆಯವರು ಉಪಸ್ಥಿರಿದ್ದರು.

Exit mobile version